Recent Posts

Sunday, January 19, 2025
ಸಿನಿಮಾಸುದ್ದಿ

ಕೆಜಿಎಫ್’ ಸಿನಿಮಾ ರಿಲೀಸ್ ದಿನವೇ ಪುನೀತ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರದ ಟೀಸರ್ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ‘ಕೆಜಿಎಫ್’ ಸಿನಿಮಾ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದೆ. ಯಶ್ ಜೊತೆಗೆ ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಆ ದಿನ ಅಭಿಮಾನಿಗಳಿಗೆ ಅಚ್ಚರಿ ನೀಡಲು ಬರುತ್ತಿದ್ದಾರೆ.

ಪುನೀತ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರದ ಟೀಸರ್ ಅದೇ ದಿನ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಗಳ ಮೂಲಕ ಗಮನ ಸೆಳೆಯುತ್ತಿರುವ ಈ ಚಿತ್ರದ ಟೀಸರ್ ಇದೀಗ ರಿಲೀಸ್ ಆಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪವನ್ ಒಡೆಯರ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರದ ನಿರ್ಮಾಪಕರಾಗಿದ್ದಾರೆ. ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ಚಿತ್ರದ ನಾಯಕಿಯರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು