ಪುತ್ತೂರು: ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ದೇಶಾದ್ಯಂತ ದ.18ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದೆ.
ಪುತ್ತೂರು ವಿಭಾಗದ ವ್ಯಾಪ್ತಿಗೆ ಬರುವ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಅಂಚೆ ಕಚೇರಿಯು ಸಿಬ್ಬಂದಿಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಕಛೇರಿ ಬಂದ್ ಮಾಡಿದ್ದಾರೆ.
ಇದರಿಂದ ಗ್ರಾಮೀಣ ಭಾಗದಲ್ಲಿ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಸಿಬ್ಬಂದಿಗಳು ಪುತ್ತೂರು ವಿಭಾಗೀಯ ಕಛೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.