ಬೆಂಗಳೂರು: ಉತ್ತರ ಕರ್ನಾಟಕ ಜನತೆಯ ಬಹು ದಿನಗಳ ಬೇಡಿಕೆಯೊಂದು ಇಂದು ಈಡೇರುವ ನಿರೀಕ್ಷೆಯಿದೆ. ಅಲ್ಲಿನ ಜನತೆಗೆ ಅನುಕೂಲವಾಗುವಂತೆ ಕೆಲ ನಿರ್ಧಾರಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಕೆಲವೊಂದು ಸರ್ಕಾರಿ ಇಲಾಖೆಗಳನ್ನು ಸ್ಥಳಾಂತರ ಮಾಡುವ ನಿರ್ಧಾರ ಕೈಗೊಳ್ಳುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ. ತಮ್ಮ ಕೆಲಸ ಕಾರ್ಯಗಳಿಗಾಗಿ ಉತ್ತರ ಕರ್ನಾಟಕದ ಜನತೆ ಬೆಂಗಳೂರಿಗೆ ಹೋಗಿ ಬರುವುದು ಕಷ್ಟವಾಗಿತ್ತು.
ಈ ಹಿನ್ನೆಲೆಯಲ್ಲಿ 9 ಸರ್ಕಾರಿ ಇಲಾಖೆಗಳನ್ನು ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸ್ಥಳಾಂತರಗೊಳಿಸಲಾಗುತ್ತದೆ.
ಬೆಳಗಾವಿಯನ್ನು 2 ನೇ ರಾಜಧಾನಿಯನ್ನಾಗಿ ಘೋಷಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಥಿವರು ತೀರ್ಮಾನಿಸಿದ್ದರಾದರೂ ಇದಕ್ಕೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ಇಲ್ಲ ಹಾಗೂ ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂಬ ಕಾರಣಕ್ಕೆ ಈ ಪ್ರಸ್ತಾಪವನ್ನು ಕೈ ಬಿಟ್ಟಿದ್ದಾರೆಂದು ಹೇಳಲಾಗಿದೆ.