Tuesday, January 21, 2025
ಸುದ್ದಿ

ಆಳ್ವಾಸ್ ವಿರಾಸತ್ 2019 ಪ್ರಶಸ್ತಿಗೆ ಖ್ಯಾತ ಗಾಯಕ ಹರಿಹರನ್ ಆಯ್ಕೆ – ಕಹಳೆ ನ್ಯೂಸ್

ಮೂಡಬಿದಿರೆ: ಇದೇ ಜನವರಿ 4 ರಿಂದ 6 ರವರೆಗೆ ಮೂಡುಬಿದಿರೆಯ ಪುತ್ತಿಗೆಯಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಸಂಸ್ಕೃತಿ ಪ್ರಿಯರಿಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ರಸದೌತಣ ನೀಡಲು ಭರದಿಂದ ಸಿದ್ಧತೆಗಳು ನಡೆಯುತ್ತಿದೆ.

ಆಳ್ವಾಸ್ ವಿರಾಸತ್ 2019 ಪ್ರಶಸ್ತಿಗೆ ಖ್ಯಾತ ಗಾಯಕ ಹಾಗೂ ಫ್ಯೂಶನ್ ಸಂಗೀತ ಸಾಧಕ ಹರಿಹರನ್ ಅವರನ್ನು ಆಯ್ಕೆ ಮಾಡಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರತಿವರ್ಷ ಆಯೋಜಿಸುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವದಲ್ಲಿ ಹರಿಹರನ್ ಅವರು ಈ ಪ್ರಶಸ್ತಿ ಪಡೆಯಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು ಈ ಬಾರಿ ಖ್ಯಾತ ಹಿನ್ನೆಲೆ ಗಾಯಕ, ಫ್ಯೂಶನ್ ಸಂಗೀತ ಸಾಧಕ ಹರಿಹರನ್ ಅವರಿಗೆ “ಆಳ್ವಾಸ್ ವಿರಾಸತ್-2019″ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.