Tuesday, January 21, 2025
ಸುದ್ದಿ

ಡಿಸೆಂಬರ್ 21 ರಿಂದ ಮಂಗಳೂರಿನಲ್ಲಿ 2018 ರ ಕರಾವಳಿ ಉತ್ಸವಕ್ಕೆ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ 2018 ರ ಕರಾವಳಿ ಉತ್ಸವಕ್ಕೆ ನಾಳೆ ಡಿಸೆಂಬರ್ 21 ರಿಂದ ಅದ್ದೂರಿ ಚಾಲನೆ ದೊರಕಲಿದೆ. ಅನೇಕ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ ಹೊರಟು, ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ಸಂಚರಿಸಲಿದೆ.

ನಂತರ ವಸ್ತುಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕರಾವಳಿ ಉತ್ಸವದ ಎಲ್ಲಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಡಿಸೆಂಬರ್ 21 ರ ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಉದ್ಘಾಟಿಸಲಿದ್ದಾರೆ. ಕರಾವಳಿ ಉತ್ಸವದ ಅಂಗವಾಗಿ ಮಂಗಳೂರು ನಗರದ ವಿವಿಧ ಕಡೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದ್ದು, 45 ದಿನಗಳ ಕಾಲ ನಡೆಯುವ ಈ ವಸ್ತುಪ್ರದರ್ಶನದಲ್ಲಿ ವೈವಿಧ್ಯಮಯ ಮನೋರಂಜನಾ ಚಟುವಟಿಕೆಗಳು, ಅಮ್ಯೂಸ್ ಮೆಂಟ್‌ಗಳು, ಮಾರಾಟ ಮೇಳ, ಮಕ್ಕಳ ಮನರಂಜನಾ ತಾಣಗಳು ಜನರನ್ನ ಆಕರ್ಷಿಸಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿ ಉತ್ಸವದ ಪ್ರಮುಖ ಭಾಗವಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಲ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್ ಎರಡು ಕಡೆ ನಡೆಯಲಿವೆ. ಸ್ಥಳೀಯ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರತಿಭಾವಂತ ಕಲಾವಿದರು, ಖ್ಯಾತಿವೆತ್ತ ಕಲಾ, ಸಾಂಸ್ಕೃತಿಕ ತಂಡಗಳಿಂದ, ಕಲಾವಿದರಿಂದ ಆಕರ್ಷಕ, ಕಾರ್ಯಕ್ರಮಗಳು ನಡೆಯಲಿವೆ.

ಯುವ ಉತ್ಸವ, ನಗೆ ಹಬ್ಬ, ಸಂಗೀತ, ನೃತ್ಯ, ನಾಟಕ, ಜಾನಪದ ಹಾಗೂ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.