Tuesday, January 21, 2025
ಸುದ್ದಿ

ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ವಿಶ್ವಹಿಂದೂ ಪರಿಷತ್, ಬಜರಂಗದಳ ವತಿಯಿಂದ ನಡೆಯುತ್ತಿರೋ ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮೂರು ಸಾವಿರಕ್ಕೂ ಹೆಚ್ಚು ಪೊಲೀಸರು ನಗರದ ಪ್ರಮುಖ ಬೀದಿಗಳಲ್ಲಿ ಪರೇಡ್ ನಡೆಸಿದ್ರು. ನಗರದ ಟೌನ್ ಕ್ಯಾಂಟಿನ್ ಸರ್ಕಲ್‌ನಿಂದ ಬೋಳರಾಮೇಶ್ವರ ದೇವಾಲಯದವರೆಗೂ ಎಸ್ಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ಪರೇಡ್ ನಡೆಸಿದರು. ಜಿಲ್ಲಾದ್ಯಂತ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಪೊಲೀಸರು ಮಾರ್ಚ್ ಫಾಸ್ಟ್ ಮಾಡುವ ಮೂಲಕ ಕೋಮು ಗಲಭೆಗೆ ಪ್ರಚೋದನೆ ನೀಡುವ ಕಿಡಿಕೇಡಿಗಳಿಗೆ ಖಡಕ್ ಸಂದೇಶ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 25 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಜಯಂತಿಯಲ್ಲಿ ಪಾಲ್ಗೊಳ್ಳೊದ್ರಿಂದ ನಗರ ಹಾಗೂ ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕ್ರಮಕೈಗೊಂಡಿದ್ದಾರೆ.