Tuesday, January 21, 2025
ಸುದ್ದಿ

ಸರ ಕಳವು ಪ್ರಕರಣ: ಓರ್ವ ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಮಂಗಳೂರಿನ ಪಡುಪೆರಾರ ಕತ್ತಲ್ಸಾರ್‌ನ ತಿಲಕ್ ಬಂಧಿತ ಆರೋಪಿ.

ಈತನಿಂದ ಒಟ್ಟು 40 ಸಾವಿರ ಮೌಲ್ಯದ 2 ಚಿನ್ನದ ಸರ, ಹೋಂಡ ಆಕ್ಟಿವಾ ದ್ವಿಚಕ್ರ ವಾಹನ, ರೂ.3,700 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಸೆಂಬರ್ 11 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಎರಮೆ ಎಂಬಲ್ಲಿ ಪುಷ್ಪಾ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕಳ್ಳ ಕುತ್ತಿಗೆಗೆ ಕೈ ಹಾಕಿ ಚಿನ್ನದ ಕರಿಮಣಿಸರವನ್ನು ಎಗರಿಸಿ ಪರಾರಿಯಾಗಿದ್ದ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು