Recent Posts

Sunday, January 19, 2025
ಸುದ್ದಿ

ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಸಂಭ್ರಮ; 10ಲಕ್ಷ ವೆಚ್ಚದ ಭೋಜನ ಶಾಲೆ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕನ್ನಡ ಮಾಧ್ಯಮದ ಸರಕಾರಿ ಶಾಲೆಗಳು ಮುಚ್ಚುತ್ತಿರುವ ಕಾಲಘಟ್ಟದಲ್ಲಿ ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಆಚರಿಸುತ್ತಿರುವುದು ನಮಗೆ ಮತ್ತು ಊರವರಿಗೆ ಹೆಮ್ಮೆಯ ವಿಷಯವಾಗಿದೆ. ಈ ಶಾಲೆಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಾಸಕರ ನೆಲೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಶತಮಾನೋತ್ಸವದ ಸವಿನೆನಪಿಗಾಗಿ ಸುಮಾರು 10ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭೋಜನ ಶಾಲೆಯನ್ನು ಮತ್ತು ಶತಮಾನೋತ್ಸವ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿ ಮಾತನಾಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಾಮದಪದವುನಲ್ಲಿ ಪ್ರಾಥಮಿಕ ಶಿಕ್ಷಣದಿಂದ ತೊಡಗಿ ಪದವಿ ಕಾಲೇಜಿನವರೆಗೆ ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್ ಎಂ. ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ವಾರ್ತಾವಾಚಕಿ ಸುಕನ್ಯಾ ಸಂಪತ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಈ ಹಿಂದೆ ಶಿಕ್ಷಕರಾಗಿದ್ದ 50 ಮಂದಿ ಶಿಕ್ಷಕರಿಗೆ ಮತ್ತು 10 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ಆನಂದ ಆಚಾರ್ಯ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಜಾನೆಟ್ ಕೊನ್ಸೆಸೊ ವರದಿ ವಾಚಿಸಿದರು. ಕೋಶಾಧಿಕಾರಿ ಅನಂತ ಪೈ ವಂದಿಸಿದರು. ದೈಹಿಕ ಶಿಕ್ಷಕ ಸಂತೋಷ್ ಕುಮಾರ್ ಸಮ್ಮಾನಿತರ ವಿವರ ನೀಡಿದರು. ರಂಗ ಕಲಾವಿದ ಎಚ್ಕೆ ನಯನಾಡು, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು