Friday, September 20, 2024
ಸುದ್ದಿ

3 ಬ್ಯಾಂಕುಗಳ ವಿಲೀನ ವಿರೋಧಿಸಿ ಡಿಸೆಂಬರ್ 26 ರಂದು ಮುಷ್ಕರಕ್ಕೆ ಕರೆ – ಕಹಳೆ ನ್ಯೂಸ್

3 ಬ್ಯಾಂಕುಗಳ ವಿಲೀನ ವಿರೋಧಿಸಿ ಬ್ಯಾಂಕ್ ಉದ್ಯೋಗಿಗಳು ಡಿಸೆಂಬರ್ 26 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಮುಂದಾಗಿದ್ದು, ಅಂದು ಬ್ಯಾಂಕ್ ಗಳು ಬಂದ್ ಆಗಲಿವೆ.

ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ದೇನಾ ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಇದಕ್ಕೆ ಉದ್ಯೋಗಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಂದು ಮುಷ್ಕರಕ್ಕೆ ಕರೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರದಂದು ಸಹ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬ್ಯಾಂಕ್ ಅಧಿಕಾರಿಗಳು ಮುಷ್ಕರ ನಡೆಸಿದ್ದರು. ಇಂದು ಬ್ಯಾಂಕುಗಳು ಕಾರ್ಯ ನಿರ್ವಹಿಸಲಿದ್ದು, ನಾಳೆ ಕ್ರಿಸ್ಮಸ್ ಪ್ರಯುಕ್ತ ರಜೆ ಇರಲಿದೆ. ಡಿಸೆಂಬರ್ 26 ಮುಷ್ಕರದ ಕಾರಣಕ್ಕೆ ಬ್ಯಾಂಕುಗಳು ಬಂದ್ ಆಗಲಿವೆ.

ಜಾಹೀರಾತು