Recent Posts

Monday, January 20, 2025
ಸುದ್ದಿ

ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ವಿಧಿವಶ – ಕಹಳೆ ನ್ಯೂಸ್

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಡಾ.ಸೂಲಗಿತ್ತಿ ನರಸಮ್ಮ ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರದ ಮೂಲದವರು. ಇವರು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಸಮಯದಲ್ಲಿ ಹೆರಿಗೆ ತಜ್ಞೆಯಾಗಿದ್ರು. ಗರ್ಭಿಣಿಯರ ಪಾಲಿನ ದೇವರು ಅಂತಲೇ ಕರೆಸಿಕೊಳ್ಳುವ ನರಸಮ್ಮ 1,500 ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸೂಲಗಿತ್ತಿ ನರಸಮ್ಮನವರ ಅಗಣ್ಯ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಅವರಿಗೆ ಪದಶ್ಮೀ ಗೌರವ ನೀಡಿತ್ತು. ನರಸಮ್ಮನವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು, ಈಗಾಗಲೇ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.

ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿಗಳು ಸೂಲಗಿತ್ತಿ ನರಸಮ್ಮನವರಿಗೆ ಲಭಿಸಿವೆ.