Sunday, November 24, 2024
ಸುದ್ದಿ

ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಎನಿಸಿದ್ದ ದಕ್ಷ ಐಪಿಎಸ್​​ ಅಧಿಕಾರಿ ಮಧುಕರ್​ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಹೈದರಾಬಾದ್​: ಕರ್ನಾಟಕ ರಾಜ್ಯದಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರವನ್ನು ಮತ್ತು ಭ್ರಷ್ಟರನ್ನು ಬೇಟೆ ಮಾಡುತ್ತಿದ್ದ ಲೋಕಾಯುಕ್ತ ಸಂಸ್ಥೆಯಲ್ಲಿ ಖಡಕ್​ ಅಧಿಕಾರಿ ಎನಿಸಿಕೊಂಡಿದ್ದ ಮಧುಕರ್​ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಚ್​೧ ಎನ್​೧ ಇಂದ ಬಳಲುತ್ತಿರುವ ಮಧುಕರ್​ ಶೆಟ್ಟಿ ಅವರಿಗೆ ಹೈದರಾಬಾದಿನ ಕಾಂಟಿನೆಂಟಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉನ್ನತ ಮೂಲಗಳ ಮಾಹಿತಿ ಪ್ರಕಾರ ಮಧುಕರ್​ ಶೆಟ್ಟಿ ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಶೆಟ್ಟಿ ಅವರ ಚಿಕಿತ್ಸೆಯ ಬಗ್ಗೆ ಖುದ್ದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಕ್ಷಣಕ್ಷಣದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜತೆಗೆ ತೆಲಂಗಾಣ ಪೊಲೀಸ್​ ಮಹಾ ನರ‍್ದೇಶಕರು ಮತ್ತು ಮುಖ್ಯ ಕಾರ್ಯದರ್ಶಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸರ್ಕಾರ ಈಗಾಗಲೇ ಸಿಐಡಿ ಎಡಿಜಿಪಿ ಪ್ರತಾಪ್​ ರೆಡ್ಡಿಯವರನ್ನು ಚಿಕಿತ್ಸೆ ಮೇಲ್ವಿಚಾರಣೆಗೆ ನೇಮಿಸಿದ್ದು ಹೈದರಾಬಾದ್​ಗೆ ಹೋಗುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉನ್ನತ ಮೂಲಗಳ ಖಚಿತ ಮಾಹಿತಿ ಪ್ರಕಾರ ಎಚ್​೧ ಎನ್​೧ ಇಂದ ಬಳಲುತ್ತಿದ್ದ ಮಧುಕರ್​ ಶೆಟ್ಟಿ ಅವರ ಶ್ವಾಸಕೋಶಕ್ಕೆ ಸೋಂಕು ತಗಲಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ.

ಈ ಬಗ್ಗೆ ಮಾಹಿತಿಗಾಗಿ ಹಿರಿಯ ಐಪಿಎಸ್​ ಅಧಿಕಾರಿಯೊಬ್ಬರನ್ನು ನ್ಯೂಸ್​ 18 ಸಂದರ್ಶಿಸಿದಾಗ, ಸದ್ಯದ ಮಾಹಿತಿ ಪ್ರಕಾರ ಮಧುಕರ್​ ಶೆಟ್ಟಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ನೀಡಿದರು. “ಈಗಷ್ಟೇ ಮಧುಕರ್​ ಶೆಟ್ಟಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ನಿನ್ನೆಗಿಂತ ಅವರು ಗುಣಮುಖರಾಗಿದ್ದಾರೆ ಮತ್ತು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇಡೀ ಪೊಲೀಸ್​ ಇಲಾಖೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥೀಸುತ್ತಿದೆ. ಅವರೊಬ್ಬ ಅತ್ಯುತ್ತಮ ದಕ್ಷ ಅಧಿಕಾರಿ,” ಎಂದರು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಶ್​ ಹೆಗಡೆ ವಿರುದ್ಧ ಬೇಸರಗೊಂಡು ಉನ್ನತ ವಿದ್ಯಾಭ್ಯಾಸದ ರಜೆಯ ಮೇಲೆ ಮಧುಕರ್​ ಶೆಟ್ಟಿ 2011 ರಲ್ಲಿ ತೆರಳಿದ್ದರು. ಅದಾಗಿ ಬರೋಬ್ಬರಿ ಐದು ವರ್ಷಗಳ ಕಾಲ ಮಧುಕರ್​ ಶೆಟ್ಟಿ ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಆ ಸಂದರ್ಬದಲ್ಲಿ ಬಹಿರಂಗವಾಗಿಯೇ ಸಂತೋಶ್​ ಹೆಗಡೆ ಅವರ ಮೇಲೆ ಅಸಮಾಧಾನವನ್ನು ಹೊರ ಹಾಕಿದ್ದರು. ಸಂತೋಶ್​ ಹೆಗಡೆ ಕೆಲ ವಿಚಾರಗಳಲ್ಲಿ ತಾರತಮ್ಯ ಮಾಡುತ್ತಿದ್ದರು ಎಂಬ ಗಂಭೀರ ಆರೋಪವನ್ನು ಮಧುಕರ್​ ಶೆಟ್ಟಿ ಮಾಡಿದ್ದರು.

ನಂತರ ಡಿಐಜಿಯಾಗಿ ಬಡ್ತಿ ಪಡೆದ ಅವರು ಕೆಲ ಕಾಲ ಪೊಲೀಸ್​ ನೇಮಕಾತಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದರು. ಅದಾದ ಕೆಲವೇ ದಿನಗಳಲ್ಲಿ ಕೇಂದ್ರ ಸೇವೆಗೆ ತೆರಳಿದ ಅವರು ಸರ್ದಾರ್​ ವಲ್ಲಭಭಾಯ್​ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಧುಕರ್​ ಶೆಟ್ಟಿ ಸಾಮಾಜಿಕ ಕಳಕಳಿ ಹೊಂದಿರುವ ಅಧಿಕಾರಿ ಎಂಬ ಹೆಸರನ್ನ ಜನಸಾಮಾನ್ಯರಿಂದ ಗಳಿಸಿರುವ ಅಧಿಕಾರಿ.