Recent Posts

Monday, November 25, 2024
ಸುದ್ದಿ

ಸಂಪುಟ ವಿಸ್ತರಣೆ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನಡೆಯಾಗುತ್ತಿದೆ: ಯಡಿಯೂರಪ್ಪ ವಾಗ್ದಾಳಿ – ಕಹಳೆ ನ್ಯೂಸ್

ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನಡೆಯಾಗುತ್ತಿದೆ. ಮೈತ್ರಿ ಸರ್ಕಾರದ ಕಚ್ಚಾಟದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಇದು ನಾಡಿನ ಜನರಿಗೆ ಮಾಡಿದ ದ್ರೋಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಬರಗಾಲದ ಬಗ್ಗೆ ನಾವು ವಿಸ್ತಾರವಾದ ಚರ್ಚೆ ಮಾಡಿ ರಾಜ್ಯದ ಗಮನ ಸೆಳೆದಿದ್ದೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧಿವೇಶನದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬೇಕಿತ್ತು. ಆದರೆ, ಅಧಿವೇಶನ ಮುಗಿದಮೇಲೆ ಮಾಡಿದ್ದಾರೆ. ರಾಜ್ಯದಲ್ಲಿ ೧೫೭ ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಹೀಗಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಚರ್ಚಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂತ್ರಿ ಪಟ್ಟ ಯಾರಿಗಾದರೂ ಕೊಡಲಿ. ಆದರೆ, ಸಂಪುಟ ವಿಸ್ತರಣೆ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನೆಡೆಯಾಗುತ್ತೆ ಎಂಬ ನೋವು ನಮಗಿದೆ. ಸಮ್ಮಿಶ್ರ ಸರ್ಕಾರಕ್ಕೆ ಯಾರ ಧ್ವನಿಯೂ ಕೇಳಿಸಿಕೊಳ್ಳುವ ಕಿವಿ ಇಲ್ಲ. ಅವರದ್ದೇ ಆದ ಅರಾಜಕತೆ ಜಂಜಾಟದಲ್ಲಿ ತಲ್ಲೀನರಾಗಿದ್ದಾರೆ.

ಕುರ್ಚಿ ಹಾಗೂ ಖಾತೆ ಉಳಿಸಿಕೊಳ್ಳುವುದು ಮುಖ್ಯ, ಇದರಲ್ಲೇ ಆಡಳಿತ ಪಕ್ಷದ ನಾಯಕರು ತಲ್ಲೀನರಾಗಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅಧಿವೇಶನ ಮುಗಿದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನಿಸಿಲ್ಲ. ಅಲ್ಲದೇ ಬರ ಪೀಡಿತ ಪ್ರದೇಶಗಳಿಗೆ ಸಿಎಂ ಹಾಗೂ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ಪ್ರಶ್ನೆ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.