Recent Posts

Sunday, January 19, 2025
ಸುದ್ದಿ

ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ; ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡದಿಂದ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಮಠದಲ್ಲಿಯೇ ಪೂರಕವಾದ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ವಾಮೀಜಿಯ ಆರೋಗ್ಯವಾಗಿದ್ದಾರೆ ಎಂದು ಬಿಜಿಎಸ್ ಆಸ್ಪತ್ರೆ ಹಿರಿಯ ವೈದ್ಯ ಡಾ. ರವೀಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯವರಿಗೆ ಸ್ವಲ್ಪ ಕೆಮ್ಮು ಹಾಗೂ ಸೋಂಕು ಇತ್ತು. ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಮಠದಲ್ಲಿ ಆಸ್ಪತ್ರೆಯಂತೆ ಚಿಕಿತ್ಸಾ ಸೌಲಭ್ಯವನ್ನು ಮಾಡಿಕೊಳ್ಳಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ವಾಮೀಜಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ಯಾವುದೇ ಅವಶ್ಯಕತೆ ಬಿದ್ದಿಲ್ಲ. ಅಲ್ಲದೆ ಸದ್ಯಕ್ಕೆ ಯಾವುದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ಸೋಂಕು ಇತ್ತು. ಆ ನೀರನ್ನು ತೆಗೆದು ಚಿಕಿತ್ಸೆ ನೀಡಲಾಗಿದೆ. ಸ್ವಾಮೀಜಿಯವರು ಸರ್ಜರಿ ಅಂತಹ ಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದುವರೆ ತಿಂಗಳಾದರೂ ಬೇಕಿದೆ ಎಂದರು.

ಜಾಹೀರಾತು

ಜಾಹೀರಾತು
ಜಾಹೀರಾತು