Recent Posts

Sunday, January 19, 2025
ರಾಜಕೀಯಸುದ್ದಿ

ಅಸಾಮಾಧಾನ ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿ ಅನೇಕ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತಿರೋದು ತಿಳಿದಿರೋ ವಿಚಾರ, ಆದ್ರೆ ಇದೀಗ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಮತ್ತೊಮ್ಮೆ ಬೇಸರ ಹೊರಹಾಕಿದ್ದಾರೆ. ನಾನು ಯಾರ ಪರವಾಗಿ ನಿಂತೆನೋ ಅವರೆ ನನ್ನ ಬೆಂಬಲಕ್ಕೆ ಬರಲಿಲ್ಲ ಅನ್ನೋದು ಸಿದ್ದರಾಮಯ್ಯನವರ ಮನದಲ್ಲಿರೋ ನೋವು.
ಹೌದು, ಸರಣಿ ಟ್ವಿಟ್‍ಗಳನ್ನು ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತ್ಯೇಕ ಲಿಂಗಾಯತ ಧರ್ಮ ಮಾಡಿ ಎಂದು ಕೇಳಿದವರು ಯಾರು? ಅವರು ಲಿಂಗಾಯತ ಸಮುದಾಯದ ಮುಖಂಡರಲ್ಲವೇ? ಆದರೆ, ಹಿಂದು ಧರ್ಮದ ವಿರೋಧಿ ಎಂಬ ಟೀಕೆಗೆ ಗುರಿಯಾಗಿದ್ದು ಮಾತ್ರ ನಾನು. ಪ್ರತ್ಯೇಕ ಧರ್ಮ ಮಾಡಿ ಎಂದು ಒತ್ತಾಯ ಮಾಡಿದವರು ಅಗತ್ಯ ಸಮಯದಲ್ಲಿ ನನ್ನ ಬೆಂಬಲಕ್ಕೆ ಬರಲೇ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವಿಟ್ ಮಾಡುವ ಮೂಲಕ ತಮ್ಮ ಮನದಲ್ಲಿರೋ ಅತೀವ ನೋವನ್ನು ಹೊರಹಾಕಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು