Sunday, January 19, 2025
ರಾಜಕೀಯಸುದ್ದಿ

ಕೂತೂಹಲಕ್ಕೆ ಹಾದಿಯಾದ ತ್ರಿವಳಿ ತಲಾಖ್ ನಿಷೇಧ ಮಸೂದೆ – ಕಹಳೆ ನ್ಯೂಸ್

ಲೋಕಸಭೆಯಲ್ಲಿ ಅಂಗೀಕಾರ ಪಡೆದಿರುವ ತ್ರಿವಳಿ ತಲಾಖ್ ನಿಷೇಧ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ. ಆದರೆ, ಬಿ.ಜೆ.ಪಿ. ಸದಸ್ಯರ ಸಂಖ್ಯೆ ರಾಜ್ಯಸಭೆಯಲ್ಲಿ ಕಡಿಮೆ ಇದ್ದು ಯಾವ ತಿರುವನ್ನ ಪಡೆಯಲಿದೆ ಅನ್ನುವುದು ಕಾದು ನೋಡಬೇಕಾಗಿದೆ.
ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಸದಸ್ಯರಿಗೆ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಇವತ್ತು ಬಿಸಿ ಬಿಸಿ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ರಚನೆಗೆ ಪ್ರತಿಪಕ್ಷಗಳು ಒತ್ತಾಯಿಸುವ ಸಾಧ್ಯತೆ ಇದೆ. ಲೋಕಸಭೆಯಲ್ಲಿನ ನಿರ್ಣಯಕ್ಕೆ ಬದ್ಧವಾಗಿರುವ ಸಾಧ್ಯತೆಗಳಿವೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಸಂಖ್ಯೆ ಜಾಸ್ತಿ ಇದ್ದು, ಪ್ರತಿಪಕ್ಷ ಕಾಂಗ್ರೆಸ್, ವಿಧೇಯಕ ಅಂಗೀಕಾರವಾಗಲು ಬಿಡುವುದಿಲ್ಲ ಎಂದು ಘೋಷಿಸಿದೆ. ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ ಎಂದು ಘೋಷಿಸಿರುವುದನ್ನು ವಿರೋಧ ಪಕ್ಷಗಳು ಒಪ್ಪಲು ಸಿದ್ಧವಿಲ್ಲ. ಸಂಸತ್‍ನ ಜಂಟಿ ಆಯ್ಕೆ ಸಮಿತಿಗೆ ಇದನ್ನು ಒಪ್ಪಿಸಬೇಕೆಂದು ಒತ್ತಾಯಿಸಿವೆ.

ಜಾಹೀರಾತು

ಜಾಹೀರಾತು
ಜಾಹೀರಾತು