ಮಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ಈ ಹಿಂದೆ ಮರಳು ಮಾಫಿಯಾ ಪ್ರಕರಣವೊಂದರಲ್ಲಿ ಆರೋಪಿಯನ್ನು ಸುಮಾರು ೬ ಕಿ.ಮೀ. ದೂರ ಬೆನ್ನಟ್ಟಿ ಹಿಡಿದು ಬಂಧಿಸಿದ್ದ ಯುವ ಐಪಿಎಸ್ ಪೊಲೀಸ್ ಅಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ| ಬಿ.ಆರ್. ರವಿಕಾಂತೇ ಗೌಡ ಭಡ್ತಿ ಹೊಂದಿದ್ದು, ಬೆಂಗಳೂರಿನ ಅಗ್ನಿಶಾಮಕ ಸೇವೆಯ ಐಜಿಪಿಯಾಗಿ ನೇಮಿಸಲಾಗಿದೆ.
೨೦೧೮ ರ ವರ್ಷಾಂತ್ಯದ ದಿನ ೧೦ ಜನ ಹಿರಿಯ ಅಧಿಕಾರಿಗಳಿಗೆ ಭಡ್ತಿಯೂ ಸೇರಿದಂತೆ ಒಟ್ಟು ೨೧ ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಅವರ ವರ್ಗಾವಣೆ ಮತ್ತು ಅವರಿಂದ ತೆರವಾದ ಸ್ಥಾನಕ್ಕೆ ಹೊಸ ಅಧಿಕಾರಿಯ ನೇಮಕವೂ ಇದರಲ್ಲಿ ಸೇರಿದೆ.