ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ, ಈ ಬಾರಿ ಜನವರಿ ೧೯ ರಂದು ಕಂಬಳ ನಡೆಯಲಿದ್ದು. ಈಗಾಗಲೇ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಂಬಳ ಕರೆ ಸಹಿತ ಇನ್ನಿತರ ಸಿದ್ಧತೆಗಳು ಭರದಿಂದ ಸಾಗುತ್ತಿದೆ.
ಇದು ೨೬ನೇ ವರ್ಷದ ಕೋಟಿ-ಚೆನ್ನಯ ಕಂಬಳವಾಗಿದ್ದು, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಉದ್ಯಮಿ ಎನ್.ಮುತ್ತಪ್ಪ ರೈ ಸಾರಥ್ಯದಲ್ಲಿ ಕಂಬಳ ಮೇಳೈಸಲಿದೆ. ಕಂಬಳ ಉತ್ಸವಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು, ಶಾಸಕರು, ಎಂಎಲ್ಸಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೇ ಸ್ಪೀಕರ್ ಪ್ರತಾಪ್‌ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಸಚಿವ ಯು.ಟಿ.ಖಾದರ್ ಅವರನ್ನು ಕಂಬಳದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದ್ದು, ಕಂಬಳದಲ್ಲಿ ಆಕರ್ಷಣೆ ಕೇಂದ್ರ ಬಿಂದುವಾಗಿ ಸಿನಿಮಾ ನಟರು ಪಾಲ್ಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.