ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಕುರಿ, ಮೇಕೆಗಳ ಮೇಲೆ ದಾಳಿ ನಡೆಸಿರುವ ಘಟನೆ ಹುಲಿಯೂರು ದುರ್ಗ ಹೋಬಳಿ ನಾಗತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗತ್ತಿಹಳ್ಳಿ ಗ್ರಾಮದ ಶಿವಲಿಂಗಯ್ಯ, ಪಟೇಲ್ ಗಂಗಯ್ಯ ಎಂಬುವರಿಗೆ ಸೇರಿದ ೪ಕುರಿ, ೭ ಮೇಕೆಗಳ ಮೇಲೆ ಮಧ್ಯರಾತ್ರಿ ಚಿರತೆ ದಾಳಿ ಮಾಡಿ ತಿಂದು ಹಾಕಿದೆಇಂದು ಬೆಳಗ್ಗೆ ರೈತರು ಕೊಟ್ಟಿಗೆಗೆ ಬಂದು ನೋಡಿದಾಗಲೇ ಚಿರತೆ ದಾಳಿ ಮಾಡಿರುವುದು ತಿಳಿದುಬಂದಿದೆ.
ದೀಪಾಂಬುಧಿಯ ಅರಣ್ಯ ಪ್ರದೇಶದ ತಪ್ಪಲಿನಲ್ಲಿರುವ ಈ ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಮನೆಯಿಂದ ಹೊರಬರಲು ಜನರು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಸುಮಾರು ಒಂದೂವರೆ ಲಕ್ಷ ಮೌಲ್ಯದ ಕುರಿ-ಮೇಕೆಗಳು ಸಾವನ್ನಪ್ಪಿದ್ದು, ಈ ಸಂಬಂಧ ಹುಲಿಯೂರು ದುರ್ಗ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು, ನಷ್ಟ ಹೊಂದಿದ ರೈತರಿಗೆ ಸರ್ಕಾರದಿಂದ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.