Monday, January 20, 2025
ಸುದ್ದಿ

ಬಂಟ್ವಾಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ಪ್ರಭಾರವಹಿಸಿಕೊಂಡ ಸೈದುಲು ಅಡಾವತ್ – ಕಹಳೆ ನ್ಯೂಸ್

ಬಂಟ್ವಾಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ಸೈದುಲು ಅಡಾವತ್ ಅವರು ನಿನ್ನೆ ಪ್ರಭಾರವಹಿಸಿದ್ದಾರೆ.

ಎ.ಎಸ್.ಪಿ. ಹ್ರಷಿಕೇಶ್ ಭಗವಾನ್ ಸೋನಾವಣೆ ಅವರು ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಪೋಲೀಸ್ ಅಧೀಕ್ಷರಾಗಿ ಮುಂಬಡ್ತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಬಂಟ್ವಾಳ ಎ.ಎಸ್.ಪಿ ಯಾಗಿ ಸೈದುಲ್ ಅಡಾವತ್ ಅವರು ಪ್ರಭಾರವಹಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತಃ ತೆಲಂಗಾಣದವರಾದ ಇವರು 2016 ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕರ್ನಾಟಕ ಕೇಡರ್‌ನ ಐ.ಪಿ.ಎಸ್. ಅಧಿಕಾರಿಯಾಗಿ ನೇಮಕಗೊಂಡಿರುತ್ತಾರೆ. ಇವರು ಈ ಬ್ಯಾಚ್‌ನ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಯೋಗಿಕ ತರಬೇತಿ ಪಡೆದು ಪ್ರಸ್ತುತ ದ.ಕ.ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ಪ್ರಭಾರವಹಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಜಿ. ಬಂಟ್ವಾಳ ವೃತ್ತ ಹಾಗೂ ಬೆಳ್ತಂಗಡಿ ವೃತ್ತದ ಪೋಲೀಸ್ ಉಪನಿರೀಕ್ಷಕರು ಉಪಸ್ಥಿತರಿದ್ದರು.