ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕಚೇರಿಯಲ್ಲಿ ರೈತರ ಜಮೀನಿನ ಕಡತ ರಕ್ಷಿಸಲು ವಿಫಲವಾಗಿರುವ ಅಧಿಕಾರಿಗಳು ಹಾಗೂ ರೈತರ ಮೇಲೆ ದೌರ್ಜನ್ಯ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ರೈತರು ಚಿಕ್ಕಮಗಳೂರಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ನಿನ್ನೆಯಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರೋ ರೈತರು ಅಧಿಕಾರಿಗಳು ವಿರುದ್ಧ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ರೈತರು ತಮ್ಮ ಜಮೀನಿನ ದಾಖಲೆ ನಕಲು ನೀಡುವಂತೆ ಮೂಡಿಗೆರೆ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದರು ಕಚೇರಿಯಲ್ಲಿ ದಾಖಲೆಗಳು ಲಭ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಅಲ್ಲದೆ ರೈತ ಮಹಿಳೆಯರ ಮೇಲೆ ಅಧಿಕಾರಿಗಳು ಹಲ್ಲೆ ನಡೆಸಿದ್ದು ಮೂಡಿಗೆರೆ ತಹಶೀಲ್ದಾರ್ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವ ವರೆಗೂ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ.