Sunday, November 24, 2024
ಸುದ್ದಿ

ಅಯೋಧ್ಯೆ ವಿವಾದ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಜ. 10 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಬೇಕಿತ್ತು. ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತು ಎಂದಿದ್ದ ಸುಪ್ರೀಂ ಕೋರ್ಟ್ ಜನವರಿ ೪ ರಿಂದ ವಿಚಾರಣೆ ಮಾಡುವುದಾಗಿ ಹೇಳಿತ್ತು. ಆದರೆ ಮತ್ತೆ ವಿಚಾರಣೆಯನ್ನು ಜನವರಿ ೧೦ ಕ್ಕೆ ಮುಂದೂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು