Recent Posts

Monday, January 20, 2025
ಸುದ್ದಿ

ಕೌಟುಂಬಿಕ ಸಮಸ್ಯೆ: ಒಂದೇ ಕುಟುಂಬದ 6 ಮಂದಿ ವಿಷ ಸೇವಿಸಿ ಆತ್ಮಹತ್ಯೆ – ಕಹಳೆ ನ್ಯೂಸ್

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ಸಂಭವಿಸಿದೆ.

ಶೇಖರಯ್ಯ ಬೀಡನಾಳ, ಪತ್ನಿ ಜಯಮ್ಮ, ಮಕ್ಕಳಾದ ಬಸಮ್ಮ, ಗೌರಮ್ಮ, ಸಾವಿತ್ರಿ ಮತ್ತು ಪಾರ್ವತಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಶೇಖರಯ್ಯ ಬೀಡನಾಳ ನಿನ್ನೆ ರಾತ್ರಿ ಪತ್ನಿ ಹಾಗೂ ನಾಲ್ವರು ಮಕ್ಕಳಿಗೆ ವಿಷ ಉಣಿಸಿ ನಂತರ ತಾನೂ ನೇಣಿಗೆ ಶರಣಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೌಟುಂಬಿ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆಯ ನಂತರವಷ್ಟೇ ನಿಖರವಾದ ಕಾರಣ ತಿಳಿದು ಬರಲಿದೆ. ಕೊಪ್ಪಳ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವಿಚಾರ ತಿಳಿದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಬಳಿ ಗ್ರಾಮಸ್ಥರು ಜಮಾಯಿಸಿದ್ದಾರೆ.