Recent Posts

Sunday, January 19, 2025
ರಾಜಕೀಯ

ಪುಟ್ಟರಂಗ ಶೆಟ್ಟಿಗೆ ಕೋಳಿವಾಡ ರಾಜೀನಾಮೆ ನೀಡಲು ಸೂಚನೆ – ಕಹಳೆ ನ್ಯೂಸ್

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಅವರ ಸಿಬ್ಬಂದಿ ಬಳಿ ಭಾರಿ ಪ್ರಮಾಣದ ಹಣ ಪತ್ತೆಯಾದ ಹಿನ್ನಲೆಯಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಖಾಸಗಿ ಟೈಪಿಸ್ಟ್ ಆಗಿರುವ ಮೋಹನ್ ಎಂಬಾತನ ಬಳಿ 25.76 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಈ ಹಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎಂಬ ಮಾತುಗಳು ಕೇಳಿ ಬಂದಿದ್ದು ಈ ಬಗ್ಗೆ ಹಲವರು ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರು.
ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಹಿಂದೆ ಕೆ. ಜಾರ್ಜ್ ಅವರ ಮೇಲೆ ಆರೋಪ ಕೇಳಿ ಬಂದಾಗ ರಾಜೀನಾಮೆ ಕೊಟ್ಟಿದ್ದರು. ನಂತರ ಆರೋಪ ಮುಕ್ತವಾದ ನಂತರ ಸಂಪುಟಕ್ಕೆ ಸೇರಿದ್ದರು. ಸಚಿವ ಪುಟ್ಟರಂಗ ಶೆಟ್ಟಿಯು ಹಾಗೇ ಮಾಡಬೇಕು ಎಂದು ಮಾಜಿ ಸ್ಪೀಕರ್ ಅಭಿಪ್ರಾಯ ಪಟ್ಟಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು