ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಕಣ್ಣೂರು ಸೇರಿದಂತೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಿಂಸಾಚಾರ ಮುಂದುವರಿದಿದೆ
.
ಕೇರಳದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರಕಾರವು ರಾಜ್ಯ ಸರಕಾರದ ವರದಿ ಕೇಳಿದೆ. “ನಾವು ಕೇರಳದ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದೇವೆ. ಆದರೆ ಇನ್ನೂ ರಾಜ್ಯ ಸರಕಾರದ ವರದಿ ಬಂದಿಲ್ಲ ” ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ. ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿ ಸುಮಾರು 3,000 ಮಂದಿಯನ್ನು ಈ ವರೆಗೆ ಬಂಧಿಸಲಾಗಿದೆ.