Recent Posts

Sunday, January 19, 2025
ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಂದ ಬಂದ್ ಗೆ ಬೆಂಬಲ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇದೀಗ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಂದ ಬಂದ್ ಗೆ ಬೆಂಬಲ ಸೂಚಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಬೆಳಿಗ್ಗೆಯಿಂದ ಎಂದಿನಂತ್ತೆ ಸಂಚಾರ ಆರಂಭ ಮಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳು ಇದೀಗ ದಿಢೀರನೆ ಸಂಚಾರ ಸ್ಥಗಿತಗೊಳಿಸುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ.

ಇದರಿಂದ ನೂರಾರು ಬಸ್ಸುಗಳು ನಿಂತಲ್ಲೇ ನಿಂತಿರುವುದರಿಂದ ನೂರಾರು ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ದೂರದ ಊರಿಗೆ ಹೋಗುವ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಕೇಂದ್ರದ ಮೋಟಾರ್ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ದಿಢೀರನೆ ಈ ನಿರ್ಧಾರ ತೆಗೆದುಕೊಂಡಿದ್ದು, ಇಂದು ಬೆಳಿಗ್ಗೆ ಸಂಚಾರ ಆರಂಭಿಸಿದಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧವು ಸಹ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.