Recent Posts

Sunday, January 19, 2025
ಸುದ್ದಿ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮರು ನೇಮಕ ಮಾಡಲು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್‌ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯ ತೀರ್ಪು ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌ ಇಂದು ತೀರ್ಪು ನೀಡಿದೆ.

ಕಡ್ಡಾಯ ರಜೆ ಮೇಲೆ ಕಳುಹಿಸುವ ಸಂಬಂಧ ಕೇಂದ್ರ ಜಾಗೃತ ಆಯೋಗ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗಳು ಕಳೆದ ಅ.23 ರಂದು ಹೊರಡಿಸಿದ್ದ ಮೂರು ಆದೇಶಗಳನ್ನು ರದ್ದುಪಡಿಸಿ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಮರು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸರಕಾರವು ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡಿಕೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಕಡ್ಡಾಯ ರಜೆ ಮೇಲೆ ಕಳುಹಿಸಿದ್ದ , ಎಂ.ನಾಗೇಶ್ವರ ರಾವ್‌ ಅವರನ್ನು ಹಂಗಾಮಿ ನಿರ್ದೇಶಕರಾಗಿ ನೇಮಕ ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವ ಸಂಬಂಧ ಕೇಂದ್ರ ಜಾಗೃತ ಆಯೋಗ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗಳು ಕಳೆದ ಅ.23ರಂದು ಹೊರಡಿಸಿದ್ದ ಮೂರು ಆದೇಶಗಳನ್ನು ರದ್ದುಪಡಿಸಬೇಕು ಎಂದು ಕೋರಿ ವರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಮರು ನೇಮಕ ಮಾಡುವಂತೆ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಇದೇ ವೇಳೆ ನ್ಯಾಯಪೀಠ ನ್ಯಾಯಪೀಠ ಅಲೋಕ್ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರು ಯಾವುದೇ ನೀತಿ ನಿಯಮಗಳಿಗೆ ಸಂಬಂಧಪಟ್ಟಂತೆ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಹೇಳಿದೆ.