Monday, January 20, 2025
ಸುದ್ದಿ

ವಿಲೀನಗೊಂಡ ಬ್ಯಾಂಕ್ ಗೆ ವಿಜಯಾ ಬ್ಯಾಂಕ್‌ ಎಂದೇ ಹೆಸರಿಡಿ ; ಕರಾವಳಿ ಸಂಸದರ ಮನವಿ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಸಂಸದ  ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಕು.ಶೋಭಾ ಕರಂದ್ಲಾಜೆ ಹಾಗೂ ಮುಂಬೈ ಸಂಸದ .ಗೋಪಾಲ ಶೆಟ್ಟಿ ಇವರನ್ನೊಂಳಗೊಂಡ ನಿಯೋಗವು ಇಂದು ಮಾನ್ಯ ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಇವರನ್ನು ಭೇಟಿ ಮಾಡಿ ಜಿಲ್ಲೆಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವುದನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದರು.

 ವಿಲೀನಗೊಂಡ ಈ ಬ್ಯಾಂಕ್ ಗೆ “ವಿಜಯಾ ಬ್ಯಾಂಕ್” ಎಂದು ನಾಮಕರಣ ಮಾಡಿ ವಿಜಯಾ ಬ್ಯಾಂಕಿನ ಹೆಸರನ್ನು ಉಳಿಸಿಕೊಡುವಂತೆ ಸಂಸದರು ಸಚಿವರಿಗೆ ಮನವಿ ಮಾಡಿದರು. ಸಂಸದರ ಮನವಿಗೆ ಮಾನ್ಯ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದು ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು