Tuesday, January 21, 2025
ಸುದ್ದಿ

ಚಿತ್ರನಟ ಯಶ್ ಅಭಿಮಾನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ – ಕಹಳೆ ನ್ಯೂಸ್

ಕನ್ನಡ ಚಿತ್ರನಟ ಯಶ್ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯೊಬ್ಬ ಗುರುವಾರ ಮೃತಪಟ್ಟಿದ್ದಾನೆ.

ಜನವರಿ 8, ಬುಧವಾರ ಯಶ್ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಯಶ್‌ರನ್ನು ನೋಡಲು ಬೆಂಗಳೂರಿನ ಅವರ ಮನೆ ಮುಂದೆ ಹೋಗಿದ್ದ ರವಿ ಎಂಬಾತ ತನ್ನ ಹೀರೋನನ್ನು ಕಾಣಲು ಸಾಧ್ಯವಾಗಲಿಲ್ಲ ಎಂಬ ಹತಾಶೆಯಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು