Tuesday, January 21, 2025
ಸುದ್ದಿ

ಭಾರತ್ ಬಂದ್‌ನಿಂದ ಕೆಎಸ್‌ಆರ್‌ಟಿಸಿಗೆ ಭಾರಿ ನಷ್ಟ – ಕಹಳೆ ನ್ಯೂಸ್

ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎರಡು ದಿನಗಳ ಕಾಲ ಭಾರತ್ ಬಂದ್‌ ಗೆ ಕರೆ ಕೊಟ್ಟ ಪರಿಣಾಮ ಸಾರಿಗೆ ಇಲಾಖೆಗೆ ಭಾರೀ ನಷ್ಟವುಂಟಾಗಿದೆ. ಬಿಎಂಟಿಸಿ, ವಾಯುವ್ಯ, ಈಶಾನ್ಯ, ಆಗ್ನೇಯ ಸಾರಿಗೆ ಸಂಸ್ಥೆಗಳು ಪ್ರತಿದಿನ ಕನಿಷ್ಟ ಪಕ್ಷ ಕೋಟ್ಯಂತರ ರೂ. ಆದಾಯ ಬರುತ್ತಿತ್ತು.

ಆದರೆ ನಿನ್ನೆಯಿಂದ ಬಹುತೇಕ ರಾಜ್ಯದೆಲ್ಲೆಡೆ ಬಸ್ಗಳ ಸಂಚಾರ ಸ್ಥಗಿತಗೊಂಡ ಪರಿಣಾಮ ಇಲಾಖೆಗೆ ದೊಡ್ಡ ಮಟ್ಟದಲ್ಲಿಯೇ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು 50 ಲಕ್ಷ ರೂ ನಷ್ಟ ಉಂಟಾಗಿದೆ ಎಂದು ವಿಭಾಗೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಷ್ಟ್ರ ವ್ಯಾಪಿ ಮುಷ್ಕರ ಎರಡನೇ ದಿನವು ನಡೆಯುತ್ತಿದ್ದು, ಇಂದು ಹಲವೆಡೆ ಸರ್ಕಾರಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಇಂದು ಕೂಡ ಸಾರಿಗೆ ಇಲಾಖೆಯ ಆದಾಯದಲ್ಲಿ ಭಾರಿ ಇಳಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು