Thursday, January 23, 2025
ಸುದ್ದಿ

ಬೈಕ್‌ಗೆ ಲಾರಿ ಡಿಕ್ಕಿ: ಯುವ ಛಾಯಾಗ್ರಾಹಕ ಸಾವು – ಕಹಳೆ ನ್ಯೂಸ್

ಮಂಗಳೂರು: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಗರದ ಯುವ ಛಾಯಾಗ್ರಾಹಕ ಮೃತ ಪಟ್ಟ ಘಟನೆ ಮಂಗಳೂರು ನಗರದ ಹೊರವಲಯ ಪಡೀಲ್ ಬಳಿ ನಡೆದಿದೆ.

ಮೃತರನ್ನ ಯೆಯ್ಯಾಡಿ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಮೂಲತಃ ಚಿಕ್ಕಮಗಳೂರು ನಿವಾಸಿಯಾದ ಗಣೇಶ್, ನಾರಾಯಣಗುರು ಮಂದಿರದಲ್ಲಿ ನಡೆದ ವಿವಾಹ ಸಮಾರಂಭದ ಚಿತ್ರೀಕರಣ ಮುಗಿಸಿ ನಗರಕ್ಕೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಪಡೀಲ್ ಬಳಿ ಕಂಟೈನರ್ ಲಾರಿ ಓವರ್‌ಟೇಕ್ ಮಾಡಿಕೊಂಡು ಬಂದು, ಸ್ಕೂಟರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಗಣೇಶ್ ತಲೆಗೆ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವವಾದ ಕಾರಣ ಆಸ್ಪತ್ರೆಗೆ ಕೆರದೊಯ್ಯುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ. ಈ ಕುರಿತು ನಗರ ಸಂಚಾರಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು