ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಿದ ಬೆನ್ನಲ್ಲೇ ಈ ಬಗ್ಗೆ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಸಿಬಿಐ ಉಳಿಸಲು ಹೋರಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನನ್ನನ್ನು ಬಲಿಪಶು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಲೋಕ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಸಂಬಂಧ ತನಿಖೆ ನಡೆಸಿದ್ದ ಕೇಂದ್ರ ವಿಚಕ್ಷಣ ದಳ ವರದಿ ಸಲ್ಲಿಕೆ ಮಾಡಿತ್ತು. ಇದರ ಆಧಾರದ ಮೇಲೆ ಉನ್ನತಾಧಿಕಾರ ಸಮಿತಿಯು ಅಲೋಕ್ ವರ್ಮಾ ಅವರನ್ನು ಪದಚ್ಯುತಗೊಳಿಸಲು ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ, ವರ್ಮಾ ಅವರನ್ನು ಸದ್ಯಕ್ಕೆ ದೆಹಲಿ ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಈ ಬಗ್ಗೆ ವರ್ಮಾ ಮೌನ ಮುರಿದಿದ್ದಾರೆ. “ಹಲವು ಪ್ರಮುಖ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆ ತರುವಲ್ಲಿ ಸಿಬಿಐ ಪಾತ್ರ ಪ್ರಮುಖವಾಗಿದೆ. ಹಾಗಾಗಿ, ಈ ಸಂಸ್ಥೆಯ ಸ್ವಾತಂತ್ರ್ಯಕ್ಕೆ ಯಾವುದೆ ದಕ್ಕೆ ಬರದಂತೆ ನೋಡಿಕೊಳ್ಳಬೇಕು,” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.