ಬೆಳ್ತಂಗಡಿ: ಶಿವಮೊಗ್ಗ ಭಾಗದಲ್ಲಿ ಹರಡಿರುವ ಮಂಗನ ಕಾಯಿಲೆಯ ಭೀತಿಯ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸತ್ತ ಮಂಗ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಮಂಗ ಸತ್ತು ನಾಲ್ಕೈದು ದಿನವಾಗಿರಬಹುದೆಂದು ಶಂಕಿಸಲಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮಂಗವನ್ನು ಆರೋಗ್ಯ ಪರೀಕ್ಷೆಗೆ ಕಳುಹಿಸಲಾಗಿಲ್ಲ.
ಇನ್ನೂ ಈ ಬಗ್ಗೆ ಮಾತನಾಡಿದ ದ. ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಮಂಗ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಪ್ರಯೋಗಶಾಲೆಗೆ ಕಳುಹಿಸಲಾಗಿಲ್ಲ.
ಮಂಗ ಯಾವ ಕಾರಣದಿಂದ ಸತ್ತಿದೆ ಎಂದು ತಿಳಿದುಬಂದಿಲ್ಲ. ಆದರೂ ಮಂಗನ ಕಾಯಿಲೆಯ ಭೀತಿಯ ಹಿನ್ನೆಲೆಯಲ್ಲಿ ಮಂಗನ ದೇಹ ಸಿಕ್ಕಿದ ಪ್ರದೇಶದ ಸುತ್ತಲೂ ಕೀಟನಾಶಕ ಸಿಂಪಡಿಸಲಾಗಿದೆ. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ.