ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಸೇರಿದಂತೆ ಪ್ರಣಾಳಿಕೆ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಪ್ರಕ್ರಿಯೆಯೂ ಬೇಗ ಮುಗಿಯಲಿದೆ ಎಂದರು.
ಜನವರಿ 18 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಸಿದ್ಧತಾ ಸಭೆ ನಡೆಸಲಾಗಿದೆ ಎಂದು ಹೇಳಿದರು.