ಹಾಸನ- ಗುಂಡ್ಯ- ಬಿ.ಸಿ.ರೋಡ್ ಅಪೂರ್ಣ ಹೆದ್ದಾರಿಯ ಅಸ್ಥವ್ಯಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಪ್ರತಿಭಟನೆ ಹಮ್ಮಿಕೊಂಡಿತ್ತು.
ಕಾಲ್ನಡಿಗೆ ಜಾಥಾವು ಮಾಣಿ ಜಂಕ್ಷನ್ಗೆ ಆಗಮಿಸಿದ್ದು, ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಹಲವಾರು ಕಾಂಗ್ರೆಸ್ ನಾಯಕರು ಮಾತನಾಡಿದರು.
ಈ ವೇಳೆ ಬಿಜೆಪಿಯ ವಿರುದ್ದದ ಮಾತುಗಳು ಕೇಳಿಬಂದವು. ಎಐಸಿಸಿಯ ಸದಸ್ಯ ಅಮೃತ್ ಶೆಣೈ, ಮಾಜಿ ಸಚಿವ ರಮಾನಾಥ ರೈ ಹಾಸನ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಕಿಡಿಕಾರಿದರು.
ಈ ವೇಳೆ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸೇರದಂತೆ ವಿವಿಧ ಬ್ಲಾಕ್ಗಳ ಕೈ ನಾಯಕರು ಭಾಗವಹಿಸಿದರು.