ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಜೆ ಎನ್ ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರನ್ನು ಟೀಕಿಸಲು ಯಾವ ನೈತಿಕ ಹಕ್ಕು ಇದೆ ಎಂದು ಶಿವಸೇನೆ ಪ್ರಶ್ನಿಸಿದೆ.
ಕನ್ಹಯ್ಯ ಕುಮಾರ್ ವಿರುದ್ಧದ ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ರಾಜಕೀಯ ಮೈಲೇಜ್ ಗಿಟ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಶಿವಸೇನೆ ಬಿಜೆಪಿಗೆ ತಾಕೀತು ಮಾಡಿದೆ. ಮುಂಬೈ ಉಗ್ರ ದಾಳಿಯ ಆರೋಪಿ ಅಜ್ಮಲ್ ಕಸಬ್‌ಗೆ ಕೂಡಾ ತನ್ನ ವಾದ ಮಂಡಿಸಲು ಅವಕಾಶ ನೀಡಲಾಗಿತ್ತು. ಆದ್ದರಿಂದ ಕನ್ಹಯ್ಯ ಕುಮಾರ್ ಅವರಿಗೂ ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಶಿವಸೇನೆ ಆಗ್ರಹಿಸಿದೆ.