Friday, September 20, 2024
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಲಾರಿ ಪಲ್ಟಿ: ಟ್ಯಾಂಕ್ ಒಡೆದು ಡೀಸೆಲ್ ಸೋರಿಕೆ – ಕಹಳೆ ನ್ಯೂಸ್

ಮಂಗಳೂರು: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕ್ ಒಡೆದು ಡೀಸೆಲ್ ಸೋರಿಕೆಯಾದ ಘಟನೆ ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಡೀಸೆಲ್ ಹೊತ್ತುಕೊಂಡು ಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಲಾರಿ ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಇನ್ನು ಚಾಲಕನಿಗೆ ಗಂಬೀರ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಟ್ಯಾಂಕ್ ಒಡೆದು ಡೀಸೆಲ್ ಸೋರಿಕೆಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಸ್ಥಳಕ್ಕೆ ಬಂಟ್ವಾಳ ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಅಗಮಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.