Sunday, November 24, 2024
ಸುದ್ದಿ

ಜ. 25 ರಂದು ಉಜ್ವಲ ಫಲಾನುಭವಿಗಳ ಸಮಾವೇಶ: ಸಂಸದ ನಳಿನ್ – ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊಗೆಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಬಂಟ್ವಾಳದಲ್ಲಿ ಜ. 25 ರಂದು ಉಜ್ವಲ ಫಲಾನುಭವಿಗಳ ಸಮಾವೇಶ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಂಟ್ವಾಳದ ಬಿ.ಸಿರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಚಿವರಾದ ರಮೇಶ್ ಜಿಗಜಿಣಗಿ, ಪೆಟ್ರೋಲಿಯಂ ಸಮಿತಿ ಅಧ್ಯಕ್ಷ ಪ್ರಹ್ಲಾದ ಜೋಷಿ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರಿವರು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಫಲಾನುಭವಿಗಳನ್ನು ಗುರುತಿಸುವ ಮಾಹಿತಿ ನೀಡುವ ಕಾರ್ಯ ನಡೆಯಲಿದ್ದು, ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದರು.

ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಜನವರಿ 22 ರಂದು ಉದ್ಯೋಗಮೇಳ ನಡೆಯಲಿದೆ. ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ಮತ್ತೆ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಹಿಂದಿನ ಯೋಜನೆಯಂತೆಯೇ ಕಾಮಗಾರಿ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ರಾಧಾಕೃಷ್ಣ ರೈ ಬುಡಿಯಾರ್, ಮೋನಪ್ಪ ದೇವಸ್ಯ, ರಾಮದಾಸ್ ಬಂಟ್ವಾಳ,ಜನಾರ್ದನ ಬೊಂಡಾಲ,ದೇವಪ್ಪ ಪೂಜಾರಿ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರಿದ್ದರು.