Sunday, January 19, 2025
ರಾಜಕೀಯಸುದ್ದಿ

ರೆಸಾರ್ಟ್ನಲ್ಲಿ ಕೈ ನಾಯಕರ ಮಾರಾಮಾರಿ..! – ಕಹಳೆ ನ್ಯೂಸ್

ರಾಮನಗರ: ಬಿಡದಿಯ ಈಗಲ್‌ಟನ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ನಡುವೆ ಶನಿವಾರ ತಡರಾತ್ರಿ ಹೊಡೆದಾಟ ನಡೆದಿದೆ ಎನ್ನಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದ ಸಿಂಗ್, ಭೀಮನಾಯ್ಕ ಹಾಗೂ ಜೆ.ಎನ್. ಗಣೇಶ್ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭ ಗಾಜಿನ ಬಾಟಲಿಯಿಂದ ಆನಂದ ಸಿಂಗ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂವರು ಶಾಸಕರು ಶನಿವಾರ ಸಂಜೆ ವಿಧಾನಸೌಧದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಬಳ್ಳಾರಿ ಜಿಲ್ಲಾ ಮಿನರಲ್ ಫಂಡ್ ಕುರಿತ ಸಭೆಯಲ್ಲಿ ಪಾಲ್ಗೊಂಡು ರಾತ್ರಿ ರೆಸಾರ್ಟಿಗೆ ವಾಪಸ್ ಆಗಿದ್ದರು. ಹಲ್ಲೆಗೆ ನಿಖರ ಕಾರಣ ಇನ್ನು ಕೂಡ ತಿಳಿದಿಲ್ಲ. ಗಣಿ ವಿಷಯಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರಬಹುದು ಎಂದು ಶಂಕಿಸಲಾಗಿದೆ.