ತುಮಕೂರು: ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ ಶಿವನ ಸನ್ನಿಧಿ ಸೇರಿದರು. ಆ ಮೂಲಕ ಕನ್ನಡ ನಾಡಿನ ಅನೇಕರಿಗೆ ಬಾಳಿನ ಬೆಳಕಾಗಿದ್ದ ನಂದಾ ದೀಪವೊಂದು ಆರಿದಂತಾಗಿದೆ.
ತುಮಕೂರಿನ ಸಿದ್ಧಗಂಗಾ ಸ್ವಾಮೀಜಿ ಸಾಧನೆಗಳ ಭಂಡಾರವನ್ನು ನಮ್ಮೆಲ್ಲರಿಗೆ ಬಿಟ್ಟು ಅಗಲಿದ್ದಾರೆ. 111 ವರ್ಷ ವಯಸ್ಸಾದರೂ ಚಟುವಟಿಕೆಯಿಂದಲೇ ಇದ್ದ ಸ್ವಾಮೀಜಿ ನಮ್ಮೊಂದಿಗೆ ಇಲ್ಲ ಎಂಬುದನ್ನು ಸದ್ಯಕ್ಕೆ, ಸುಲಭಕ್ಕೆ ಅರಗಿಸಿಕೊಳ್ಳಲು ಸಾಧ್ಯವೇ ಇಲ್ಲ.
ಕರ್ನಾಟಕ ರತ್ನ ಡಾ. ಶ್ರೀ.ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಎಲ್ಲರೂ ಸಂಬೋಧಿಸುತ್ತಾರೆ. ಅವರ ಸಾಧನೆ ಮತ್ತು ಕೊಡುಗೆಯನ್ನು ಅಕ್ಷರಗಳ ಮುಖೇನ ಕಟ್ಟಿಕೊಡುವುದು ಕಷ್ಟ.
ಅಕ್ಷರ, ಜ್ಞಾನ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬಾಳಲ್ಲಿ ಹೊಸ ಬೆಳಕನ್ನು ಮೂಡಿಸಿದ ಸೂರ್ಯ ಇಂದು ಮರೆಯಾಗಿದೆ.