ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಭಾರಿ ಸಿದ್ಧತೆ ನಡೆಸಿದ್ದು, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳು ವೇದಿಕೆ ಸಿದ್ಧ ಮಾಡಿಕೊಳ್ಳತೊಡಗಿವೆ.
ಇದಕ್ಕೆ ಪೂರ್ವಭಾವಿಯಾಗಿ ಕೋಲ್ಕತ್ತಾದಲ್ಲಿ ಜನವರಿ 19 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರ ನೇತೃತ್ವದಲ್ಲಿ ಯುನೈಟೆಡ್ ಇಂಡಿಯಾ ಹೆಸರಿನಲ್ಲಿ ಬೃಹತ್ ರ‍್ಯಾಲಿ ನಡೆದಿದೆ.
ಬ್ರಿಗೇಡ್ ಪರೇಡ್ ಮೈದಾನದಲ್ಲಿ ರ‍್ಯಾಲಿ ನಡೆದ ಬಳಿಕ ಆಗಮಿಸಿದ ಅತಿಥಿಗಳಿಗೆ ಔತಣ ಕೂಟ ಏರ್ಪಡಿಸಲಾಗಿದ್ದು, ಈ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪೂರ್ಣ ಉಸ್ತುವಾರಿ ವಹಿಸಿಕೊಂಡಿದ್ದರಲ್ಲದೆ ತಾವೇ ಖುದ್ದಾಗಿ ಊಟ ಬಡಿಸಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.