ಬೆಂಗಳೂರು: ತುಮಕೂರು ಶ್ರೀ ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ ಹುಟ್ಟಿದ ಗ್ರಾಮವನ್ನು ದತ್ತು ಪಡೆಯುವುದಾಗಿ ಸಚಿವ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವು ಮಾಗಡಿ ತಾಲೂಕಿನ ರಾಮನಗರ ಜಿಲ್ಲೆಯಲ್ಲಿದೆ.
ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾರಣ ಸಿದ್ದಗಂಗಾ ಶ್ರೀಗಳ ವೀರಾಪುರ ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.