Recent Posts

Saturday, September 21, 2024
ಸುದ್ದಿ

ಸಾರ್ವಜನಿಕರು ರೋಗದ ಬಗ್ಗೆ ಆತಂಕಪಡಬೇಕಾಗಿಲ್ಲ: ವೈದ್ಯಾಧಿಕಾರಿ ದೀಪಾ ಪ್ರಭು ಸ್ಪಷ್ಟನೆ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನಲ್ಲಿ ಮಂಗನಕಾಯಿಲೆ ಬಗ್ಗೆ ಇದುವರೆಗೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಸಾರ್ವಜನಿಕರು ರೋಗದ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬಂಟ್ವಾಳ ತಾಪಂನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಂಟ್ವಾಳ ತಾಲೂಕು ಪಂಚಾಯತ್‌ನ 2018-2019 ನೇ ಸಾಲಿನ ತ್ರೈಮಾಸಿಕ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಪಕ್ಕದ ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಶಂಕಿತ ಮಂಗನ ಕಾಯಿಲೆ ರೋಗದ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ದೃಢಪಟ್ಟಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ತಾಲೂಕಿನಲ್ಲಿ ಮಂಗನಕಾಯಿಲೆ ಪ್ರಕರಣ ಪತ್ತೆಯಾಗಿಲ್ಲ. ಮುಂಜಾಗೃತಾ ಕ್ರಮವಾಗಿ ಆರೋಗ್ಯ, ಅರಣ್ಯ ಹಾಗೂ ಇತರ ಇಲಾಖೆಯ ಸಹಯೋಗದಲ್ಲಿ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಅರಣ್ಯ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜಾಗೃತಿ ಕಾರ್ಯ ನಡೆಸಲಾಗುತ್ತಿದ್ದು, ಕರಪತ್ರಗಳನ್ನು ಹಂಚಲಾಗಿದೆ. ಅದಲ್ಲದೆ, ಕಾಡಿನಂಚಿನ ಪ್ರದೇಶಗಳಿಗೆ ಪ್ರವೇಶ ನಿರ್ಬಂದಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.