ಸಿದ್ದಗಂಗಾ ಶ್ರೀ ಅಂತಿಮ ದರ್ಶನ ಪಡೆದು ಹಿಂದಿರುಗುವಾಗ ಬೊಲೆರೋ ಕಾರು ಮರಕ್ಕ ಢಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಬಳಿ ನಡೆದಿದೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರ ಗಾಯವುಂಟಾಗಿದೆ. ಪರಮೇಶ್ವರ ಎಂಬವರು ಮೃತ ದುರ್ದೈವಿ. ಗಾಯಾಳುಗಳನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.