Thursday, January 23, 2025
ಸುದ್ದಿ

ಇಂದು ಹಿರಿಯ ನಾಗರಿಕರ ಬಡಾವಣೆಯ ‘ನವಚೇತನ’ ಲೋಕಾರ್ಪಣಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು: ಸುಂದರ ಪರಿಸರಗಳ ನಡುವೆ ಸುಸಜ್ಜಿತ ವ್ಯವಸ್ಥೆಗಳನ್ನು ಒಳಗೊಂಡಿರುವ ನವಚೇತನ ಎಂಬ ಹಿರಿಯ ನಾಗರಿಕರ ಬಡಾವಣೆಯ ಲೋಕಾರ್ಪಣಾ ಸಮಾರಂಭವು ಪುತ್ತೂರಿನ ಶಾಂತಿಗೋಡಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ನಡೆಯಲಿದೆ.

ಈ ಕಾರ್ಯಕ್ರಮವನ್ನು ರಾಕೃಷ್ಣ ಮಠದ ಅಧ್ಯಕ್ಷರು ಹಾಗೂ ರಾಮಕೃಷ್ಣ ಮಿಷನ್ ಕಾರ್ಯದರ್ಶಿಳಾಗಿರುವ ಸ್ವಾಮಿ ಜಿತಕಾಮಾನಂದಜೀಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ ಸರ್ಕಾರದ ನಿವೃತ್ತ ಕಾರ್ಯದರ್ಶಿ ಹಾಗೂ ಬಾಹ್ಯಾಕಾಶ ಅಣುಶಕ್ತಿ ಆಯೋಗ ಮತ್ತು ಭೂ ಆಯೋಗಗದ ಸದಸ್ಯರಾಗಿರುವ ವಿವಿ ಭಟ್ ಐಎಎಸ್ ಅವರು ವಹಿಸಿಕೊಳ್ಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಗೌರವಾನ್ವಿತ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ, ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉರಿಮಜಲು ರಾಮ ಭಟ್ ಹಾಗೂ ಅರುಣ್ ಕುಮಾರ್ ಪುತ್ತಿಲ ಭಾಗವಹಿಸಲಿದ್ದಾರೆ.

ಇನ್ನು ಕಾರ್ಯಕ್ರಮದ ಕೊನೆಯಲ್ಲಿ ಬೆಂಗಳೂರಿನ ಶ್ರೀ ವಿದ್ಯಾಭೂಷಣ ಹಾಗೂ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಲಿದೆ.