ಕಟೀಲು ಮೇಳದ ಕಲಾವಿದ, ಪ್ರಸಿದ್ಧ ಪುಂಡು ವೇಷಧಾರಿ ಲೋಕೇಶ್ ಮುಚ್ಚೂರು ಅವರಿಗೆ ಈ ಬಾರಿಯ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಲಭಿಸಿದೆ.
ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನ ಜಾತ್ರೆಯ ಸಂದರ್ಭ ಜ.23 ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ಸಂದರ್ಭ ಹಿರಿಯ ಅರ್ಥಧಾರಿ ನಡಿಬೆಟ್ಟು ಧರ್ಮರಾಜ ಕಟ್ಟಡರಿಗೆ ಗೌರವ ಸನ್ಮಾನ ಮಾಡಲಾಗುವುದು.
ಮೇರು ಭಾಗವತ ಬಲಿಪ ನಾರಾಯಣ ಭಾಗವತರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.