ನವದೆಹಲಿ: ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ನವದೆಹಲಿಯ ರಾಜಪಥ ರಸ್ತೆ ಸಿದ್ಧಗೊಳ್ಳುತ್ತಿದೆ. ಪ್ರತಿಬಾರಿಯಂತೆ ಈ ಬಾರಿಯೂ ಕೂಡ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಲಿದೆ.
ಈ ಬಾರಿ ವಿಶೇಷ ಏನೆಂದರೆ ಗಾಂಧೀಜಿ ಮತ್ತು ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕರ್ನಾಟಕದಿಂದಲೂ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಭರ್ಜರಿ ತಯಾರಿ ನಡೆದಿದೆ.
ಸತತ ಹತ್ತು ವರ್ಷಗಳು ರಾಜಪಥ್ ರಸ್ತೆಯಲ್ಲಿ ಕರ್ನಾಟಕದ ತೇರು ಓಡಿಸಲು ಅವಕಾಶ ಸಿಕ್ಕಿದ್ದು ಈ ಬಾರಿಯೂ ರಾಜ್ಯದ ಸಂಸ್ಕೃತಿ ಅನಾವರಣಗೊಳ್ಳಲಿದೆ.
1924 ರಲ್ಲಿ ಮೊದಲ ಬಾರಿ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ನ 39 ನೇ ಬೆಳಗಾವಿ ಅಧಿವೇಶನದ ಕಥಾವಸ್ತುವನ್ನು ಕರ್ನಾಟಕ ಆಯ್ಕೆ ಮಾಡಿದ್ದು, ಕಲಾ ನಿರ್ದೇಶಕ ಶಶಿಧರ್ ಹಡಪಾ ನೇತೃತ್ವದಲ್ಲಿ 50 ಮಂದಿ ಕಲಾವಿದರು ರಚಿಸಿರುವ ರಾಜ್ಯದ ಸ್ತಬ್ಧ ಚಿತ್ರ ಕಣ್ಮನ ಸೆಳೆಯುತ್ತಿದೆ.