Tuesday, January 21, 2025
ರಾಜಕೀಯಸುದ್ದಿ

ಇಂದಿರಾ ಗಾಂಧಿ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ – ಕಹಳೆ ನ್ಯೂಸ್

ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಿಯಾಂಕಾ ಗಾಂಧಿ ಅಧಿಕೃತವಾಗಿ ರಾಜಕೀಯ ಅಖಾಡಾಕ್ಕೆ ಇಳಿದಿದ್ದಾರೆ. ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಜವಾಬ್ದಾರಿ ನೀಡಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿಗೆ ವಹಿಸಲಾಗಿದೆ. ಲೋಕಸಭೆ ಚುನಾವಣೆಗಳು ಹತ್ತಿರುವಾಗುತ್ತಿರುವ ನಡುವೆಯೇ ಈ ನೇಮಕ ನಡೆದಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೊದಲು ಸಹೋದರ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಯವರ ಪ್ರಚಾರ ಸಭೆಗಳಲ್ಲಿ ಪ್ರಿಯಾಂಕಾ ಪಾಲ್ಗೊಳ್ಳುತ್ತಿದ್ದರಾದರೂ ಅಧಿಕೃತವಾಗಿ ಪಕ್ಷದಲ್ಲಿ ಯಾವುದೇ ಹುದ್ದೆಗಳನ್ನು ವಹಿಸಿಕೊಂಡಿರಲಿಲ್ಲ.

ಕಳೆದ ವರ್ಷ ಎಐಸಿಸಿ ಅಧ್ಯಕ್ಷ ಗಾದಿಯಿಂದ ಕೆಳಗಿಳಿದಿದ್ದ ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿಯನ್ನು ಆ ಹುದ್ದೆಗೆ ನೇಮಕ ಮಾಡಿದ್ದರು. ಇದೀಗ ಗಾಂಧಿ ಕುಟುಂಬದ ಮತ್ತೊಂದು ಕುಡಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ.