Monday, January 20, 2025
ಸುದ್ದಿ

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸ್ವಾಮೀಜಿ ನಿಧನ – ಕಹಳೆ ನ್ಯೂಸ್

ಮಂಗಳೂರು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಚಿತ್ರಾಪುರ ಮಠದ ಪೀಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ (80) ಬುಧವಾರ ಸಂಜೆ ನಿಧನರಾಗಿದ್ದಾರೆ.

ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಠದ 18 ನೇ ಯತಿಗಳಾಗಿದ್ದ ವಿದ್ಯಾವಲ್ಲಭ ತೀರ್ಥರು 1962 ರಲ್ಲಿ ಪಟ್ಟ ಸ್ವೀಕರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಲ್ಕು ವರ್ಷಗಳಿಂದ ಸ್ವಾಮೀಜಿಗೆ ಆರೋಗ್ಯ ಸರಿ ಇಲ್ಲದ ಕಾರಣ ಶಿಷ್ಯರೇ ಪುತ್ತಿಗೆಯಲ್ಲಿ ತಮ್ಮ ಪಟ್ಟದ ದೇವರಾದ ಶ್ರೀ ಕಾಳೀಯಮರ್ದನ ಕೃಷ್ಣನ ಪ್ರತಿಮೆಯನ್ನು ಪೂಜಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ವಿದ್ಯಾವಲ್ಲಭತೀರ್ಥರು ಉಡುಪಿ ಪೇಜಾವರ ಮಠದಲ್ಲಿ ಧಾರ್ಮಿಕ ಶಿಕ್ಷಣ ಪೂರೈಸಿದ ಬಳಿಕ ಚಿತ್ರಾಪುರ ಮಠದಲ್ಲಿ ದೇವಸ್ಥಾನದ ಜಾತ್ರೆ, ಮಠದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದರು.