Monday, January 20, 2025
ಸುದ್ದಿ

ಕುಂಭಮೇಳ ಕಾರ್ಯಕ್ರಮ ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕು: ಹೆಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಫೆಬ್ರವರಿ 17 ರಿಂದ ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಕಾರ್ಯಕ್ರಮ ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಂಭಮೇಳ ಕುರಿತು ಬುಧವಾರ ಬೆಂಗಳೂರಿನ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾವೇರಿ, ಕಪಿಲಾ, ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯಬೇಕು. ನಮ್ಮ ಧಾರ್ಮಿಕ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಪ್ರತೀಕವಾಗಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಈ ಕುಂಭಮೇಳಕ್ಕೆ ಶಾಶ್ವತವಾದ ಮೂಲ ಸೌಕರ್ಯಗಳ ಒದಗಿಸಲು ಗಮನಹರಿಸಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಈ ಕ್ಷೇತ್ರದಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಮಾಡಲು ನೀಲಿನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆ ಆರಂಭಕ್ಕೆ ಮುನ್ನ ಶಿವೈಕ್ಯರಾದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.