Monday, January 20, 2025
ಸುದ್ದಿ

ಕರ್ನಾಟಕದಲ್ಲಿ ಮೊದಲ ಮಹಿಳಾ ಡಿಜಿಪಿ ಅಧಿಕಾರಿಯಾದ ನೀಲಮಣಿ ರಾಜು | ರಾಜ್ಯ ಸರ್ಕಾರದ ಅಧಿಕೃತ ಆದೇಶ..!

ಬೆಂಗಳೂರು : ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ.

ಉತ್ತರಖಂಡ್ ಮೂಲದ ನೀಲಮಣಿ ರಾಜು ಅವರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ನೀಲಮಣಿ ರಾಜು ಅವರು 1983ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್ ಕೆ ದತ್ತ ಅವರು ಇಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನೀಲಮಣಿ ರಾಜು ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೆ ನೀಲಮಣಿ ರಾಜು ಅವರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response